ಉ.ಕ ಸುದ್ದಿಜಾಲ ಚಾಮರಾಜನಗರ :

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ವಿಧಾನಸಭಾ ಮತಕ್ಷೇತ್ರದ ಶಾಸಕ ಎನ್ ಮಹೇಶ್ ಭಾವಚಿತ್ರ ಇರುವ ಪೋಸ್ಟರ್‌ಗೆ ಸಗಣಿ ಬಳಿದು ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಳ್ಳೆಗಾಲ ಪಟ್ಟಣದ ಪ್ರವಾಸಿ ಮಂದಿರದ ಬಳಿ ಹಾಕಿದ್ದ ಮತ್ತೊಮ್ಮೆ ಬಿಜೆಪಿ ಎಂಬ ಪೋಸ್ಟರ್ ಹಾಗೂ ಇನ್ನೊಂದೆಡೆ ಎನ್ ಮಹೇಶ್ ಭಾವಚಿತ್ರದ ಮೇಲೆ 40% ಎಂದು ಬರೆದಿರುವುದು ಪತ್ತೆ.

ಲಿಂಗಣಾಪುರದ ರಸ್ತೆ ಬದಿಯಲ್ಲಿ ಹಾಕಿರುವ ಪೋಸ್ಟ್‌ರ್‌ನಲ್ಲಿ ಎನ್. ಮಹೇಶ್ ಭಾವಚಿತ್ರದ ಮೇಲೆ 40% ಎಂದು ಬರೆದು ಅವಹೇಳನ ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿವೆ.