ಉ.ಕ ಸುದ್ದಿಜಾಲ ಕೊಪ್ಪಳ :

ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್‌ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.

ಶಾಸಕ ಸ್ಥಾನ ಅನರ್ಹ!

ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ ಕೋರ್ಟ್ ತೀರ್ಪಿನಿಂದಾಗಿ ಜನಾರ್ದನ ರೆಡ್ಡಿ ಅವರು ಶಾಸಕ ಸ್ಥಾನದಿಂದ ಅನರ್ಹರಾಗುತ್ತಿದ್ದಾರೆ. ನಾಲ್ಕು ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆಯಾದರೆ ಶಾಸಕ ಸ್ಥಾನ ಅನರ್ಹವಾಗಲಿದೆ. ಜೊತೆಗೆ ಮುಂದಿನ 6 ವರ್ಷಗಳ ಕಾಲ ಅಪರಾಧಿ ಚುನಾವಣೆಗೂ ಸ್ಪರ್ಧಿಸುವಂತಿಲ್ಲ.