ಬೆಳಗಾವಿ :

ಶಾಂತಿ ಕಾಪಾಡುವಂತೆ ಮನವಿ ಮಾಡುವ ಬದಲು ಪ್ರಚೋದನೆ, ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿರುವ ಮಹಾರಾಷ್ಟ್ರ ರಾಜಕಾರಣಿಗಳು.

ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಪಮಾನ ಪ್ರಕರಣ, ಆರೋಪಿಗಳ ಬಂಧನಕ್ಕೆ ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ ಒತ್ತಾಯ. ಶಿವಾಜಿ ಪ್ರತಿಮೆಗೆ ಅಪಮಾನಾಡಿದ್ದವರ ವಿರುದ್ಧ ಕ್ರಮಕ್ಕೆ ಒತ್ತಾಯ. ಕ್ರಮ ಕೈಗೊಳ್ಳದಿದ್ದರೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಕರ್ನಾಟಕ ಸರ್ಕಾರವೇ ಹೊಣೆ ಎಂದ ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ.

ಏಕನಾಥ ಶಿಂಧೆ – ಮಹಾರಾಷ್ಟ್ರದ ಆರೋಗ್ಯ ಸಚಿವ

ಗಲಾಟೆ, ಗಲಭೆ ಸಂದರ್ಭದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುವ ಬದಲು ಕಾನೂನು ಕೈಗೆತ್ತಿಕೊಳ್ಳುವ ಎಚ್ಚರಿಕೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರ ಘಟನೆ ಕುರಿತ ಹೇಳಿಕೆಗೆ ಮಹಾರಾಷ್ಟ್ರ ಸಚಿವನ ಕ್ಯಾತೆ. ಕರ್ನಾಟಕದ ಮುಖ್ಯಮಂತ್ರಿ ಹೇಳಿಕೆ ಖಂಡಿಸಿದ ಮಹಾರಾಷ್ಟ್ರ ಆರೋಗ್ಯ ಸಚಿವ ಏಕನಾಥ ಶಿಂಧೆ. ಶಿವಸೇನಿಕರು ಸಮಾಜದ್ರೋಹಿಗಳಿಗೆ ತಕ್ಕ ಪಾಠ ಕಲಿಸಲು ಸಿದ್ದರಿದ್ದಾರೆ. ಕಾನೂನು ಕೈಗೆತ್ತಿಕೊಂಡು ಅಹಿತಕರ ಘಟನೆ ನಡೆದರೆ ಕರ್ನಾಟಕ ಸರ್ಕಾರವೇ ಹೊಣೆ ಎಂದು ಮಹಾ ಸಚಿವ ಏಕನಾಥ ಶಿಂಧೆ.