ಉ.ಕ ಸುದ್ದಿಜಾಲ ಮಂಡ್ಯ :
ಪಾಂಡವಪುರ ಪಟ್ಟಣದಲ್ಲಿ ಜ.18 ರಂದು ನಡೆದಿರುವ ಘಟನೆ ಇದಾಗಿದ್ದು, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಹಲ್ಲೆ ಆರೋಪ. ಸಿಬ್ಬಂದಿ ಹಾಗೂ ತಹಶೀಲ್ದಾರ ವಿರುದ್ಧ ಪ್ರತಿಭಟನೆ ಮಾಡಿದ್ದ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು. ಇದರಿಂದ ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು, ಸದ್ಯ ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.