ಉ.ಕ ಸುದ್ದಿಜಾಲ ಮಂಡ್ಯ :
ನಾಳೆಯೇ ಕಮಲ ಮುಡಿಯಲಿರುವ ಸಂಸದೆ ಸುಮಲತಾ ಅಂಬರೀಶ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ.
ನಾಳೆ ಬೆಳಿಗ್ಗೆ 11.30 ಕ್ಕೆ ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಮಲತಾ ಅಧಿಕೃತ ಘೋಷಣೆ ಮಾಡಿದ್ದಾರೆ. ಮಂಡ್ಯದ ಅಭಿವೃದ್ದಿಯೇ ನನ್ನ ಮೂಲ ಮಂತ್ರ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎನ್ನುವ ಆಶಯದಿಂದ ಬಿಜೆಪಿ ಸೇರ್ಪಡೆ.
ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳು, ಅಂಬರೀಶ್ ಅಭಿಮಾನಿಗಳು, ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಇರಲಿ ಸುಮಲತಾ ಮನವಿ ಮಾಡಿದ್ದಾರೆ.