ಉ.ಕ‌ ಸುದ್ದಿಜಾಲ :

ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂನಲ್ಲಿ ನಡೆದಿದೆ.

ಎಡಪದವಿನ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19), ವಗ್ಗದ ಜೈಸನ್(19) ನೀರುಪಾಲಾದ ಯುವಕರು. ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಬಂದಿದ ಮೂವರು ಯುವಕರು.

ಊಟ ಮುಗಿಸಿ ನೀರಿನಲ್ಲಿ ಸ್ನಾನ ಮಾಡಲು ಹೋಗಿದ್ದ ಮೂವರು ಯುವಕರು. ಸ್ಥಳಕ್ಕೆ ತೆರಳಿ ವೇಣೂರು ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರ ಮನೆಯವರ ಆಕ್ರಂದನ ಮುಗಿಲು ಮುಟಿದೆ.