ಉ.ಕ ಸುದ್ದಿಜಾಲ ಮೂಡಲಗಿ :

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ‌ಹೊರವಲಯದಲ್ಲಿ ನಡೆದಿದೆ.

ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ(42)
ರಾಜಶ್ರೀ ಮುಗೋಳಖೋಡ (36) ಮೃತ ದುರ್ದೈವಿಗಳು.‌ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.

ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತಿ ಪತ್ನಿ ಸಾವನಪ್ಪಿದ ಹಿನ್ನಲೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.