ಮೂಡಲಗಿ :

ಬೆಳಗಾವಿ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಒತ್ತಾಯ‌ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌.

ಅನೇಕ ವರ್ಷಗಳಿಂದ ಕಾಂಗ್ರೆಸ್, ಬಿಜೆಪಿಯಿಂದ ತಲಾ ಓರ್ವ ಅಭ್ಯರ್ಥಿ ಕಣಕ್ಕೆ ಇಳಿಸಲಾಗುತ್ತದೆ. ಈ ಸಲ ಬಿಜೆಪಿಯ ಎರಡನೇ ಅಭ್ಯರ್ಥಿಯಾಗಿ ಲಖನ್ ಟಿಕೆಟ್ ಕೊಡಿ ಎಂದು ಒತ್ತಾಯಿಸಿದ್ದು, ಮೂಡಲಗಿಯ ಅರಭಾವಿ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ಹೇಳಿದ್ದಾರೆ.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌

ಅರಬಾವಿಯಲ್ಲಿ 600ಕ್ಕೂ ಹೆಚ್ಚು ‌ಮತದಾರರು‌ ಇದ್ದಾರೆ. ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಮೊದಲ ಅಭ್ಯರ್ಥಿಯಾಗಿದ್ದಾರೆ. ಎರಡನೇ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧೆಗೆ ಅವಕಾಶ ಕೊಡಬೇಕು. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪರ ಲಖನ್ ಕೆಲಸ ಮಾಡಿದ್ದಾರೆ. ಮಹಾಂತೇಶ ಕವಟಗಿಮಠ, ‌ಲಖನ್ ಜಾರಕಿಹೊಳಿ ಇಬ್ಬರು ಗೆಲುವಿಗೆ ಶ್ರಮ‌‌‌ ವಹಿಸುತ್ತೇನೆ ಎಂದು ಹೇಳಿದ ಲಖನ ಜಾರಕಿಹೊಳಿ.