ಉ.ಕ ಸುದ್ದಿಜಾಲ ಮುಂಬೈ :
ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ನೇವಲ್ ಟಾಟಾ ವಯೋಸಹಜ ಅನಾರೋಗ್ಯ ಕಾರಣಗಳ ಹಿನ್ನೆಲೆಯಲ್ಲಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರತನ್ ಟಾಟಾ ಅವರಿಗೆ 86 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವಿಷಯ ದೇಶಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿತ್ತು. ವಯೋಸಹಜ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಪಷ್ಟನೆ ಕೂಡಾ ನೀಡಲಾಗಿತ್ತು.
ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್ ಚೇರ್ಮನ್ ಆಗಿರೋ ರತನ್ ಟಾಟಾ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಇಟ್ಟು ಟ್ರೇಟೆಂಟ್ ನೀಡಿದ್ರೂ ಚಿಕಿತ್ಸೆ ಫಲಿಸದೆ ರತನ್ ಟಾಟಾ ತಮ್ಮ ಜೀವನದ ಅಂತಿಮ ಉಸಿರು ನಿಲ್ಲಿಸಿದ್ದಾರೆ.
ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 86 ವರ್ಷದ ಹಿರಿಯ ಜೀವಿಗಳಾದ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಎಂದಿನಂತೆಯೇ ಜನರಲ್ ಚೆಕಪ್‌ಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ತಾವೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಿದ್ರೂ ಫಲಿಸದೆ ನಿಧನರಾಗಿದ್ದಾರೆ.
1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು.