ಉ.ಕ ಸುದ್ದಿಜಾಲ ಮೈಸೂರ :

ಬೈಕ್‌ ಕಾರು ನಡುವೆ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗೇಟ್ ನಡೆದಿದೆ.

ಕೀರ್ತಿ (28) ಸಾವನ್ನಪ್ಪಿದ ಯುವಕ. ಹುಣಸೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬೈಕ್. ಮೈಸೂರಿನಿಂದ ಹುಣಸೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಸವಾರ ಕೀರ್ತಿ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ‌ ಮಾಡಲಾಗಿದೆ. ಈ ಕುರಿತು ಹುಣಸೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.