ಉ.ಕ ಸುದ್ದಿಜಾಲ ಮೈಸೂರ :

ರಾಜ್ಯದಲ್ಲಿ ಹಿಜಾಬ್ ನಿಷೇಧದ ಆದೇಶವನ್ನು ವಾಪಸ್‌ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಡುಪು ಧರಿಸುವುದು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧವನ್ನು ಹಿಂಪಡೆಯಲು ನಾನು ಹೇಳಿದ್ದೇನೆ ಎಂದಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರ ದೇಶ, ವಿದೇಶದಲ್ಲಿ ಭಾರೀ ಚರ್ಚೆಯಾಗಿತ್ತು.

ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬರೀ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಹೇಳಿದ್ದೀನಿ ಎಂದಿದ್ದಾರೆ.