ಉ.ಕ ಸುದ್ದಿಜಾಲ ನಿಪ್ಪಾಣಿ :
ನಾಳೆ ಅಕ್ಟೋಬರ್ 4 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣಕ್ಕೆ ಕೇಂದ್ರ ಸಾರಿಗೆ ಸಚಿವ ನಿತೀನ ಗಡ್ಕರಿ ಆಗಮಿಸಲಿದ್ದಾರೆ.
ನಿಪ್ಪಾಣಿ ನಗರದ ವಿ ಎಸ್ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 4 ರಂದು ಜರುಗಲಿರುವ ಮಾಜಿ ರಾಜ್ಯ ಸಭಾ ಸದಸ್ಯ ಹಾಗೂ ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ನಾಗರಿಕ ಸತ್ಕಾರ ಕಾರ್ಯಕ್ರಮದಲ್ಲಿ ನಿತೀನ ಗಡ್ಕರಿ ಭಾಗಿಯಾಗಲಿದ್ದಾರೆ.
ಇನ್ನೂ ಈ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾಗಿಯಾಗಲಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.