ಉ.ಕ ಸುದ್ದಿಜಾಲ ನಿಪ್ಪಾಣಿ :

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕಾರದಗಾ ಗ್ರಾಮದ ಅಲ್ಲಮಪ್ರಭು ಸ್ವಾಮೀಜಿ ವೇದಿಕೆಯಲ್ಲಿ ನಡೆದ 6ನೇ ಕನ್ನಡ ಸಮಾವೇಶದ ಸಮ್ಮೇಳನದಲ್ಲಿ ಮುಖ್ಯ ಅಥಿತಿಗಳಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗಿಯಾಗಿದ್ರು.

ವೇದಿಕೆ ಮೇಲೆ ಮಾತಾಡೋ ಭರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೀಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಾಲಿಗೆ ಹರಿಬಿಟ್ಟಿದ್ದಾರೆ.

ಕನ್ನಡ ಭಾಷೆಗೆ ಬಹಳಷ್ಟು ವರ್ಷಗಳ ಇತಿಹಾಸವಿದೆ ಎಂಬುದನ್ನು ಸಾಹಿತಿಗಳು ತೋರಿಸಿದ್ದಾರೆ. ನಮ್ಮ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ನಮ್ಮ ಭಾಷೆ, ಕಲೆ, ಸಂಸ್ಕೃತಿಯಲ್ಲಿ ಶ್ರೀಮಂತವಾಗಿದೆ.

ನಾವು ಈ ನಾಡಿನಲ್ಲಿ ಜನ್ಮ ಪಡೆಯಲು ಪುಣ್ಯ ಮಾಡಿರಬೇಕು. ಆದ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದಿದ್ದಾರೆ.