ಉ.ಕ ಸುದ್ದಿಜಾಲ ನಿಪ್ಪಾಣಿ :

ಶೌಚಾಲಯಕ್ಕೆ ಹೋಗಿಬರುವುದಾಗಿ ಹೇಳಿ ವ್ಯಕ್ತಿಯೋರ್ವ ಆತ್ಮಹತ್ಯೆ ‌ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುನ್ನೂರ ಗ್ರಾಮದಲ್ಲಿ ನಡೆದಿದೆ.

ಕುನ್ನೂರು ಗ್ರಾಮದ ಪ್ರಕಾಶ ಶ್ರೀಪತಿ ಗೋಂಧಳಿ (54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೌಚಾಲಯಕ್ಕೆ ಹೋಗಿಬರುವುದಾಗಿ ಹೆಂಡತಿಗೆ ಹೇಳಿ ಬಳಿಕ ನೇಣಿಗೆ ಶರಣಾಗಿದ್ದಾನೆ‌. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ನಿಪ್ಪಾಣಿ ಗ್ರಾಮಾಂತ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.