ಉ.ಕ ಸುದ್ದಿಜಾಲ ರಾಯಬಾಗ :
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ರಾಯಬಾಗ ರೈಲ್ವೆ ಸ್ಟೇಷನ್ ಸಮೀಪ ನಿನ್ನೆ ಸಾಯಂಕಾಲ ರಿಕ್ಷಾ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಮಹಾಂತೇಶ್, ಅವರ ಪತ್ನಿ ಸಾಕ್ಷಿ ಹಾಗೂ 6 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
