ಉತ್ತರ ಕರ್ನಾಟಕ ಸುದ್ದಿಜಾಲ ರಾಯಚೂರು :

ಬುಲೆರೋ ವಾಹನ ಹಾಗೂ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸವಾರನ ಪತ್ನಿಗೆ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ನೂರುಸ ರಂಗ್ರೇಜ್ ಸಾವು

ಸ್ಕೂಟಿಯಲ್ಲಿ ಮನೆಗೆ ವಾಪಾಸಾಗುತ್ತಿದ್ದ ದಂಪತಿಗಳು ಅಪಘಾತದಲ್ಲಿ ಬೈಕ್ ಸವಾರ ನೂರುಸ ರಂಗ್ರೇಜ್ (40) ಸ್ಥಳದಲ್ಲೇ ಸಾವನಪ್ಪಿದ್ದಾನೆ. ನೂರುಸ ರಂಗ್ರೇಜ್ ಪತ್ನಿ ಜ್ಯೋತಿ ಬಾಯಿ ರಂಗ್ರೇಜ್ ಗಂಭೀರ ಗಾಯಗೊಂಡಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಅಪಘಾತದ ನಂತರ ಬುಲೆರೋ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.