ಉ.ಕ ಸುದ್ದಿಜಾಲ ರಾಯಚೂರು :
1 ಸಾವಿರ ರೂಪಾಯಿ ಸಾಲ ವಾಪಸ್ ಕೇಳಿದ್ದಕ್ಕೆ ನಡೆದಿದ್ದ ಕೊಲೆ ಪ್ರಕರಣ. ಪ್ರಕರಣದ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ, 1 ಲಕ್ಷ 30 ಸಾವಿರ ರೂ. ದಂಡ ರಾಯಚೂರಿನ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ 2020 ರಲ್ಲಿ ನಡೆದಿದ್ದ ಕೊಲೆ ಪ್ರಕರಣದ ತೀರ್ಪು ಪ್ರಕಟ.
ಪರಶುರಾಮ ಜೈಲು ಶಿಕ್ಷೆಗೆ ಗುರಿಯಾದ ಆರೋಪಿ ಶೇಖರ್ ಕೊಲೆಯಾಗಿದ್ದ ವ್ಯಕ್ತಿ ಪರಶುರಾಮ ಶೇಖರ್ ಹತ್ತಿರ 3 ಸಾವಿರ ರೂಪಾಯಿ ಸಾಲ ಪಡೆದಿದ್ದ 2 ಸಾವಿರ ರೂಪಾಯಿ ಮರಳಿಸಿ ಒಂದು ಸಾವಿರ ರೂಪಾಯಿ ಬಾಕಿ ಉಳಿಸಿಕೊಂಡಿದ್ದ.
ಶೇಖರ್ ಆ ಒಂದು ಸಾವಿರ ರೂಪಾಯಿಯನ್ನ ಪದೇ ಪದೇ ಕೇಳುತ್ತಿದ್ದಾನೆ ಅಂತ ದ್ವೇಷದಿಂದ ಹಲ್ಲೆ ಮಾಡಿದ್ದ ಶೇಖರ್ ಮನೆ ಮುಂದೆ ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಬ್ಬಿಣದ ಪಟ್ಟಿಯಿಂದ ಹಲ್ಲೆ ಮಾಡಿದ್ದ ಗಾಯಗೊಂಡ ಶೇಖರ್ ಸಾವನ್ನಪ್ಪಿದ್ದ ಹಿನ್ನೆಲೆ ಕೊಲೆ ಪ್ರಕರಣ ದಾಖಲಾಗಿತ್ತು
ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ 7 ವರ್ಷ ಕಠಿಣ ಸಜೆ ರಾಯಚೂರಿನ 2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
1 ಸಾವಿರ ರೂಪಾಯಿ ಸಾಲ ವಾಪಸ್ ಕೇಳಿದ್ದಕ್ಕೆ ನಡೆದಿದ್ದ ಕೊಲೆ ಪ್ರಕರಣ : ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ
