ಉ.ಕ ಸುದ್ದಿಜಾಲ ರಾಮನಗರ :

ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ನನ್ನನ್ನು ಬೆಂಬಲಿಸಿದ ರಾಮನಗರ ಮಹಾಜನತೆಗೆ ನನ್ನ ಧನ್ಯವಾದ. ಕಾರ್ಯಕರ್ತರಿಗೆ ಸಾಮಾಜಿಕ ಜಾಲತಾಣದಲ್ಲಿ ಧನ್ಯವಾದ ತಿಳಿಸಿದ ನಿಖಿಲ ಕುಮಾರಸ್ವಾಮಿ.

ಸೋಲಿನ ಕುರಿತು ತನ್ನ ಫೇಸ್ ಬುಕ್ ನಲ್ಲಿ ಬರೆದುಕೊಂಡಿರೋ ನಿಖಿಲ್ ಕುಮಾರಸ್ವಾಮಿ. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ.

ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಇದನ್ನ ನಾನು ನನ್ನ ತಾತ ಹೆಚ್ಡಿಡಿ, ತಂದೆ ಹೆಚ್ಡಿಕೆ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ.
ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ.

ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ರಾಮನಗರ ಸೋಲಿನ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರೋ ನಿಖಿಲ್. ಫಲಿತಾಂಶದ ಬಳಿಕ ಎಲ್ಲೂ ಕಾಣಿಸಿಕೊಳ್ಳದ ನಿಖಿಲ್ ಸಾಮಾಜಿಕ ಜಾಲತಾಣದ ಮೂಲಕ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.