ರಾಮನಗರ :

ಡಿ.16ರಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜನ್ಮದಿನ ಹಿನ್ನೆಲೆ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಟ್ವೀಟ್ ಮೂಲಕ ಅಭಿಮಾನಿಗಳು, ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಕೋವಿಡ್ ಹಿನ್ನೆಲೆ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಕೋವಿಡ್‌-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ-ತುರಾಯಿ ಹಾಕಿ, ಕೇಕ್‌ ಕತ್ತರಿಸಿ ಸಂಭ್ರಮಿಸುವುದು ಬೇಡ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ.