ಉ.ಕ ಸುದ್ದಿಜಾಲ ರಾಯಚೂರು :

ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‌ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ‌ಲಿಂಗಸೂಗೂರು ಪಟ್ಟಣದ ವಿಸಿಬಿ ಕಾಲೇಜು ಹಾಸ್ಟೆಲ್‌ನಲ್ಲಿ ನಡೆದಿದೆ.

ಹಾಸ್ಟೆಲ್ ನ ಫ್ಯಾನ್ ಗೆ ನೇಣು ಹಾಕಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಐಶ್ವರ್ಯ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತ ಐಶ್ವರ್ಯ ವಿಸಿಬಿ ಕಾಲೇಜಿನ ಫಸ್ಟ್ ಪಿಯು ಸೈನ್ಸ್‌ ನಲ್ಲಿ ಅಭ್ಯಾಸ ಮಾಡುತ್ತಿದ್ದಳು. ಲಿಂಗಸೂಗೂರು ತಾಲೂಕಿನ ಗೋನವಾಟ್ಲ ತಾಂಡಾದ ವಿದ್ಯಾರ್ಥಿನಿ ‌ಸಾವು.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು. ಮೃತದೇಹ ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ. ಲಿಂಗಸೂಗೂರು ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು