ಉ.ಕ ಸುದ್ದಿಜಾಲ ಸವದತ್ತಿ :

ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಿನ್ನೆ ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಜರುಗಿತು. ಕೇವಲ ಒಂದುವರೆ ತಿಂಗಳಲ್ಲಿ ಸವದತ್ತಿ ಯಲ್ಲಮ್ಮದೇವಿ ಹುಂಡಿಗೆ 1.18 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನ ಹಾಗೂ ಸವದತ್ತಿ ಪೊಲೀಸ್‌ ಠಾಣೆ ಅಧಿಕಾರಿಗಳ ಸಮ್ಮುಖದಲ್ಲಿ ಹಣ ಎಣಿಸಲಾಯಿತು. ಏಳುಕೊಳ್ಳದ ಯಲ್ಲಮ್ಮನ ಸಾನ್ನಿಧ್ಯಕ್ಕೆ ದೇಶದ ನಾನಾ ಕಡೆಗಳಿಂದ ಭಕ್ತರ ದಂಡೇ ಹರಿದುಬರುತ್ತದೆ. ಭಕ್ತಾಧಿಗಳು ತಮ್ಮ ಇಷ್ಟಾರ್ಥ ಈಡೇರಿಸಿದ ದೇವಿಗೆ ಕಾಣಿಕೆ ರೂಪದಲ್ಲಿ ಚಿನ್ನ, ಬೆಳ್ಳಿ ಆಭರಣ ನೀಡುತ್ತಾರೆ. ಅಲ್ಲದೆ, ದೇವಸ್ಥಾನ ಹುಂಡಿಯಲ್ಲಿ ಹಣ ಹಾಕಿ ಭಕ್ತಿ ಸಮರ್ಪಿಸುತ್ತಾರೆ.