ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿಯಲ್ಲಿ ಪ್ರಸಾದ ಸೇವಿಸಿ 46ಜನ ಅಸ್ತವ್ಯಸ್ಥ ಐವರ ಸ್ಥಿತಿ ಗಂಭೀರ! ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಘಟನೆ. ಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ ಗ್ರಾಮದ ಜನ.

ಅನ್ನ ಪ್ರಸಾದ ಮತ್ತು‌ ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದ ಗ್ರಾಮಸ್ಥರು. ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ. ಕೂಡಲೇ ಅಸ್ತವ್ಯಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ.

ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ. ಸದ್ಯ ಗ್ರಾಮದಲ್ಲಿಯೇ ಬೀಡುಬಿಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ.

ಅಹಿತಕರ ಘಟನೆ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡ್ತಿರುವ ತಾಲೂಕಾ ವೈದ್ಯರು. ವಾಂತಿ ಭೇದಿಯಿಂದ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಸಾದ ಸೇವಿಸಿದವರಲ್ಲಿ ವಾಂತಿಭೇದಿ ಕಂಡುಬಂದ ತಕ್ಷಣವೇ ಎಲ್ಲರಿಗೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ.

ಪ್ರತಿ ಗಂಟೆಗೂ ರೋಗಿಗಳ ಮಾನಿಟರ್ ಚೆಕ್ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ‌ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಆರೋಗ್ಯ ಅಧಿಕಾರಿಗಳು.

ಮಾಹಿತಿ ಸಿಗುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಸವದತ್ತಿ ಮತಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯ. ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ಶಾಸಕ ವೈದ್ಯ. ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ ಶಾಸಕ ವಿಶ್ವಾಸ ವೈದ್ಯ