ಉ.ಕ ಸುದ್ದಿಜಾಲ ಉಡುಪಿ :
ಕಲಬುರ್ಗಿ ಗಣೇಶೋತ್ಸವಕ್ಕೆ ಪ್ರವೇಶ ನಿಷೇಧ, ಪದೇ ಪದೇ ನನಗೆ ನಿರ್ಬಂಧ ಹೇರುವುದು ಬಿಜೆಪಿಗೆ ಶೋಭೆ ತರುವುದಿಲ್ಲ, ಇದು ಜಿಲ್ಲಾಧಿಕಾರಿಗಳ ಆಜ್ಞೆ ಅಲ್ಲ, ಇದು ಸರ್ಕಾರದ ಆಜ್ಞೆ, ಸರಕಾರ ಅಂದ್ರೆ ಬಿಜೆಪಿ ನೀವು ತಡೆಯುತ್ತಿರುವುದು ಮುತಾಲಿಕ್ ನನ್ನು ಅಲ್ಲ ಹಿಂದುತ್ವವನ್ನು ಹಿಂದುತ್ವದ ಶಕ್ತಿ ಸೇರುವ ಜಾಗಕ್ಕೆ ನಾಯಕನನ್ನು ತಡೆದು ದ್ರೋಹ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿ ಆಕ್ರೋಶ ವ್ಯಕ್ತಪಡಿಸಿದರು.
ಇದು ಸಂವಿಧಾನ ವಿರೋಧಿ ನಡೆ ಮತ್ತು ಸ್ವಾತಂತ್ರ್ಯ ಹರಣ, ಕಾಂಗ್ರೆಸ್ ಕಾಲದಲ್ಲಿ ಬ್ಯಾನ್ ಮಾಡಿದಾಗ ನೀವು ವಿರೋಧ ಮಾಡಿದ್ದೀರಿ. ಪ್ರವೀಣ್ ನೆಟ್ಟಾರು ಮನೆಗೆ ಸಾಂತ್ವನ ಹೇಳುವಾಗಲೂ ನಿರ್ಬಂಧ ಮಾಡಿದ್ದೀರಿ, ಗಂಗೊಳ್ಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲೂ ಭಾಗವಹಿಸಲು ಬಿಟ್ಟಿಲ್ಲ.ನಾನು ಮಾತನಾಡಿದರೆ ಗಲಭೆ ಆಗುತ್ತೆ ಅನ್ನುತ್ತಿರಿ. ಗಲಾಟೆಯಾದರೆ ನನ್ನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿ.
ಸಾಧ್ಯವಾದರೆ ಗಲಾಟೆ ಮಾಡುವವರನ್ನು ಹದ್ದುಬಸ್ತಿನಲ್ಲಿ ಇಡಿ. ಹಿಂದುಗಳಿಂದ ಯಾವತ್ತೂ ಗಲಭೆಯಾಗಿಲ್ಲ ತಿಳಿದಿರಲಿ. ಬಿಜೆಪಿ ಸರಕಾರದ ಮಾನ ಮರ್ಯಾದೆಯನ್ನು ಬೀದಿ ಬೀದಿ ಮನೆ ಮನೆಗೆ ಹೋಗಿ ತೆಗಿತೀನಿ. ಪದೇಪದೇ ನಿರ್ಬಂಧ ಹೇರಿ ನಾಟಕ ಮಾಡ್ತಾ ಇದ್ದೀರಾ?. ಮುಸ್ಲಿಮರನ್ನು, ಶತ್ರುಗಳನ್ನು, ದಂಗೆ ಕೋರರನ್ನು ನನ್ನ ಮೇಲೆ ಎತ್ತಿ ಕಟ್ಟುತ್ತೀರಾ?. ಹಿಂದುಗಳ ಕೊಲೆಯಾಗುವಾಗ ಸಂಘಟನೆಗಳಿಗೆ ನೀವು ಬಲ ತುಂಬಬೇಕು. ನ್ಯಾಯಾಲಯದಿಂದ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ಕೊಡುವ ಕೆಲಸ ಮಾಡಿಸ್ತೀನಿ ಎಂದು ಹೇಳಿದರು.