ಉ.ಕ ಸುದ್ದಿಜಾಲ ಉಡುಪಿ :

ಉಡುಪಿ ಜಿಲ್ಲೆ, ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಉದ್ಯಮಿಯ ಮುಗ್ಧತೆ ಯನ್ನು ಬಳಸಿಕೊಂಡು ಮಹಾವಂಚನೆ ಮಾಡಿದ ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರ ಕುಂದಾಪುರ

ಪ್ರಮುಖ ಆರೋಪಿ ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ‌ ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು.

ಟಿಕೆಟ್ ಕೊಡಿಸುವುದಾಗಿ ನಾಲ್ಕೈದು ಜನರ ತಂಡದಿಂದ ನಾಟಕ ಮಾಡಲಾಗಿತ್ತು, ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದಾರೆ. ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್ ಶ್ರೀಕಾಂತ್ ನಾಯಕ್ ಪೆಲತ್ತೂರು ವಶಕ್ಕೆ ಪಡೆದ ಪೊಲೀಸರು.

ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು. ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿಸಿದ್ದ ಖದೀಮರು ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿ ವಂಚನೆ.

ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನ ವಶಕ್ಕೆ ಪಡೆದ ಪೊಲೀಸರು ಚೈತ್ರಾ ಕುಂದಾಪುರ, ಗಗನ್ ಕಡೂರು,ಶ್ರೀಕಾಂ ನಾಯಕ್, ಪ್ರಸಾದ್ ಪೊಲೀಸ್ ವಶದಲ್ಲಿದ್ದಾರೆ.