ಉ.ಕ ಸುದ್ದಿಜಾಲ ಕಾಗವಾಡ :

ಉಗಾರ ರೈಲು ನಿಲ್ದಾಣದಲ್ಲಿ ಯುವಕನೊರ್ವ ರೈಲು ಹಳ್ಳಿಗೆ ಸಿಲುಕಿ‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ  ಕಾಗವಾಡ ತಾಲೂಕಿನ ಉಗಾರ ರೈಲು ನಿಲ್ದಾಣ ಬಳಿ ನಡೆದಿದೆ.

ಕಾಗವಾಡ ತಾಲೂಕಿನ ಉಗಾರ ಗ್ರಾಮದ ಕುತಬುದ್ದಿನ ಇಮಾಮಸಾಬ ಶೇಖ (37) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ ಕುತುಬುದ್ದಿನ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ‌ ಶರಣಾಗಿದ್ದಾನೆ.

ಈ‌ ಕುರಿತು ಬೆಳಗಾವಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.