ಉ.ಕ ಸುದ್ದಿಜಾಲ ಬೆಂಗಳೂರು :
ಹೊಸ ಪಡಿತರ ಚೀಟಿಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದು. ಅದನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಿದ್ದಾರೆ ಎಂದು ಅರಣ್ಯ ಮತ್ತು ಆಹಾರ ಸಚಿವ ಉಮೇಶ್ ಕತ್ತಿ ವಿಧಾನಸಭೆಯಲ್ಲಿ ತಿಳಿಸಿದರು.
ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ, ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಅದನ್ನು ವಿತರಿಸುವ ಕಾರ್ಯ ಮುಂದುವರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆ ಶಾಸಕ ಎಲ್. ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯವೂ ನಿಧಾನಗತಿಯಲ್ಲಿ ನಡೆದಿತ್ತು.
ಅಲ್ಲದೆ, ಈ ಅವಧಿಯಲ್ಲಿ ಬಯೋಮೆಟ್ರಿಕ್ ಹಿಂಪಡೆದ ಕಾರಣ ಪಡಿತರ ಚೀಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.ಈಗ ಅರ್ಹರು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅದನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಿದ್ದಾರೆ. ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ ಎಂದರು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಮೈಸೂರು ಜಿಲ್ಲೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮಾರ್ಚ್ 31ರೊಳಗೆ ಪಡಿತರ ಚೀಟಿಯನ್ನು ಇವರಿಗೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು