ಉ.ಕ ಸುದ್ದಿಜಾಲ ಅಥಣಿ :

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಶೀಘ್ರದಲ್ಲಿ ಸಿಎಂ ಆಗುತ್ತೀರಿ ಈಗಾಗಲೇ ಉತ್ತರ ಕರ್ನಾಟಕದಿಂದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದು, ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಉ.ಕ ದಿಂದ ಮುಂದಿನ ಸಿಎಂ ಲಕ್ಷ್ಮಣ ಸವದಿ ಆಗಲಿ ಎಂದು ಜೈನ ಮುನಿ ಒಬ್ಬರು ಆಶೀರ್ವದಿಸಿದ ಘಟನೆಯೊಂದು ಜರುಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಜರುಗುತ್ತಿರುವ ಪಂಚಕಲ್ಯಾಣ ಮಹಾ ಮಹೋತ್ಸವದಲ್ಲಿ ಪೂಜ್ಯ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಉತ್ತರ ಕರ್ನಾಟಕದಲ್ಲಿ ಯಾರು ಸಿಎಂ ಆಗಿಲ್ಲ ನೀವು ಮುಂದೆ ಸಿಎಂ ಆಗಿ ಎಂದು ಆಶೀರ್ವಾದ ಮಾಡಿದ್ದಾರೆ.

ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ಲಾಗುತ್ತಿದ್ದು ಲಕ್ಷ್ಮಣ ಸವದಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಉತ್ತರ ಕರ್ನಾಟಕದಿಂದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದು, ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಉ.ಕ ದಿಂದ ಮುಂದಿನ ಸಿಎಂ ಲಕ್ಷ್ಮಣ ಸವದಿ ಆಗಲಿ ಎಂದು ಅಥಣಿ ಮತಕ್ಷೇತ್ರದ ಜನರ ಅಭಿಲಾಷೆಯಾಗಿದೆ.