ಉ.ಕ ಸುದ್ದಿಜಾಲ ವಿಜಯಪುರ :

ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ನಡೆದಿದೆ.

ಉಕ್ಕಳಿ ಗ್ರಾಮದ ಹೊರ ಭಾಗದಲ್ಲಿರುವ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಆತ್ಮಹತ್ಯೆ. ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿ ತಾಯಿ ಆತ್ಮಹತ್ಯೆ. ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತರು.

ಕಳೆದ ಎರಡು ದಿನಗಳ ಹಿಂದೆ ಗಂಡನ ಮನೆಯಲ್ಲಿ ಜಗಳಾಡಿದ್ದ ರೇಣುಕಾ. ಬಳಿಕ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಬಿಟ್ಟು ಹೋಗಿದ್ದ ರೇಣುಕಾ. ಕಾಣೆಯಾಗಿದ್ದರ ಕುರಿತು ನಿನ್ನೆ ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು…

ಇಂದು ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ.