ಉ.ಕ ಸುದ್ದಿಜಾಲ ವಿಜಯಪುರ :
ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿ ಎರಡು ಲಾರಿ ಮಧ್ಯೆ ಡಿಕ್ಕಿ ಓರ್ವ ಚಾಲಕ ಸ್ಥಳದಲ್ಲಿಯೇ ಸಾವು ಮತ್ತೋರ್ವ ಚಾಲಕ ಗಂಭೀರ ಗಾಯಗೊಂಡಿದ್ದಾನೆ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಕ್ರಾಸ್ ಬಳಿ ಈ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಪ್ರಭುಲಾಲ್ ಗುಜ್ಜಲ್ (42) ಮೃತಪಟ್ಟಿರುವ ದುರ್ದೈವಿ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.