ಉ.ಕ ಸುದ್ದಿಜಾಲ ವಿಜಯಪುರ :

ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ. ಪ್ರಚೋದನಕಾರಿ ಭಾಷಣ ಹಿನ್ನೆಲೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ ಆದೇಶ..

ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಭಾಷಣ ಮಾಡಿದ್ದ ಕನ್ನೇರಿ ಶ್ರೀಗಳು. ಲಿಂಗಾಯತ ಮಠಾಧೀಶರ ಕುರಿತು ಆಕ್ಷೇಪಾರ್ಹ ಮಾತುಗಳನ್ನಾಡಿದ್ದ ಕನ್ನೇರಿ ಶ್ರೀ. ಈ ಹಿನ್ನೆಲೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ…

ದಿನಾಂಕ 16-10-2025 ರಿಂದ 14-12- 2025 ವರೆಗೆ ಜಿಲ್ಲಾ ಪ್ರವೇಶ ನಿರ್ಬಂಧ. ಇದೇ ದಿ. 16-17 ರಂದು ಬಸವನ ಬಾಗೇವಾಡಿಯಲ್ಲಿ ನಡೆಯುವ ಸಿದ್ದರಾಮೇಶ್ವರ ಸಪ್ತಾಹ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದ್ದ ಕನ್ನೇರಿ ಶ್ರೀಗಳು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶ್ರೀಗಳ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ…