ಯಾದಗಿರಿ :

ಟ್ರಾಕ್ಟರ್ ಪಲ್ಟಿ ಕಾರ್ಮಿಕರಿಬ್ಬರು ಸಾವನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ನಡೆದಿದೆ.

ಕೂಲಿ‌ ಕೆಲಸ ಮುಗಿಸಿಕೊಂಡು ಟ್ರಾಕ್ಟರ್ ನಲ್ಲಿ ನಾಯ್ಕಲ್ ಗ್ರಾಮಕ್ಕೆ ಬರುತ್ತಿದ್ದ ಕಾರ್ಮಿಕರು. ಈ ವೇಳೆ ಟ್ರಾಕ್ಟರ್ ಪಲ್ಟಿಯಾಗಿದ್ದು, ಪರವಿನ್ ಬೇಗಂ, ಮಾನಮ್ಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. 13 ಜನ ಕಾರ್ಮಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಭೇಟಿ, ಪರಿಶೀಲನೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.