ಉ.ಕ ಸುದ್ದಿಜಾಲ ಹುಕ್ಕೇರಿ :
ಕಾಂಗ್ರೆಸ್ ಪ್ರಭಾವಿ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯ ಪ್ರಮುಖ ಮುಖಂಡರಾಗಿದ್ದಾರೆ. ಯಮಕನಮರಡಿ ಕ್ಷೇತ್ರವನ್ನು ಸತೀಶ್ ಜಾರಕಿಹೊಳಿ ಪ್ರತಿನಿಧಿಸುತ್ತಿದ್ದು, ಇವರು ಸುದೀರ್ಘ 32 ವರ್ಷಗಳ ರಾಜಕೀಯದ ಅನುಭವ ಹೊಂದಿದ್ದು ನಾಲ್ಕನೇ ಬಾರಿಗೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ, ಸ್ಮಶಾನದಿಂದ ಪ್ರಚಾರ ಆರಂಭಿಸಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಇದೀಗ ನಾಲ್ಕನೇ ಬಾರಿಗೆ ಸಚಿವರಾಗಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ತಮ್ಮದೆಯಾದ ವರ್ಸಸ್ ಜೊತೆಗೆ ಜಿಲ್ಲೆಯಲ್ಲಿ ನಾಯಕತ್ವ ಹೊಂದಿರುವ ಸತೀಶ ಜಾರಕಿಹೋಳಿ ಯಮಕನಮರಡಿ ಮತಕ್ಷೇತ್ರದಿಂದ ಸ್ಪರ್ಧಿಸಿ 57 ಸಾವಿರ ಅಂತರದಿಂದ ಗೆಲುವನ್ನ ಸಾಧಿಸಿದ್ದಾರೆ.
ಇವರು ತಮ್ಮದೆಯಾದ ಸಂಘಟನೆಗಳನ್ನ ಕಟ್ಟಿಕೊಂಡು ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತಮ್ಮದೆಯಾದ ಪಾತ್ರ ವಹಿಸಿದ್ದು ಮಾನವ ಬಂಧುತ್ವ ವೆಡದಿಕೆಯನ್ನ ಸ್ಥಾಪಿಸುವುದರ ಮೂಲಕ ಹಿಂದೂಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯದಲ್ಲೂ ಕೂಡಾ ಸತೀಶ ಜಾರಕಿಹೋಳಿ ಮಾಸ ಲೀಡರ. ಕಾಂಗ್ರೆಸ್ ಪಕ್ಷದಲ್ಲಿ ಮೊದಲಿನಿಂದಲೂ ತಮ್ಮದೆಯಾದ ಛಾಪನ್ನ ಮೂಟಿಸಿರುವ ಸತೀಶ ಜಾರಕಿಹೊಳಿ ಅಪಾರ ಬಳಗವನ್ನ ಹೊಂದಿದ್ದಾರೆ.
1998 ರಲ್ಲಿ ಪರಿಷತ್ ಮೂಲಕ ಸತೀಶ್ ಜಾರಕಿಹೊಳಿ ರಾಜಕೀಯ ಪ್ರವೇಶಿಸಿದ್ದರು. 2004 ರಲ್ಲಿ ಎರಡನೇ ಬಾರಿಗೆ ಪರಷತ್‌ಗೆ ಆಯ್ಕೆ ಆದ ಸತೀಶ್ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದರು. ಕ್ಷೇತ್ರ ಪುನರವಿಂಗಡಣೆ ಬಳಿಕ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸತೀಶ್ 2008 ರಲ್ಲಿ ಯಮಕನಮರಡಿ ಎಸ್‌ಟಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಅಲ್ಲಿಂದ ಇಲ್ಲಿಯ ತನಕ ಸತತ ನಾಲ್ಕು ಸಲ ಸತೀಶ್ ಆಯ್ಕೆ ಆಗುತ್ತ ಬಂದಿದ್ದಾರೆ. 2013 ರ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸತೀಶ್ ಅಬಕಾರಿ ಹಾಗೂ ಸಣ್ಣ ಕೈಗಾರಿಕೆ ಸಚಿವರಾಗಿ ಎರಡೂವರೆ ವರ್ಷ ಸೇವೆ ಸಲ್ಲಿಸಿದ್ದಾರೆ. 2020ರಲ್ಲಿ ಎಚ್‌ಡಿಕೆ ನೇತೃತ್ವದ ಮೈತ್ರಿ ಸರ್ಕಾರದಲ್ಲಿ 4 ತಿಂಗಳು ಅರಣ್ಯ ಸಚಿವರಾಗಿದ್ದರು. ಇದೀಗ ನಾಲ್ಕನೇ ಬಾರಿಗೆ ಸತೀಶ್ ಸಚಿವರಾಗುತ್ತಿದ್ದಾರೆ.
ರಾಜ್ಯದಲ್ಲಿ ಯಾವುದೇ ಸರ್ಕಾರ ಬರಲಿ ಜಾರಕಿಹೊಳಿ ಕುಟುಂಬದ ಒಬ್ಬರಾದರೂ ಸಚಿವರು ಇರುತ್ತಿದ್ದರು. ಕಳೆದ ದಶಕದಿಂದ ಜಾರಕಿಹೊಳಿ ಕುಟುಂಬಕ್ಕೆ ಮಂತ್ರಿ ಸ್ಥಾನ ಪಡೆಯುತ್ತಲೇ ಬಂದಿದ್ದಾರೆ. ಬಿಎಸ್‌ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಸಿಡಿ ಕೇಸ್‌ನಿಂದ 2021 ಮಾರ್ಚ್ 31 ಮಂತ್ರಿಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆದರೆ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷರಾಗಿದ್ದರು. ಕಳೆದ ಎರಡು ವರ್ಷಗಳಿಂದ ಜಾರಕಿಹೊಳಿ ಕುಟುಂಬ ಸಚಿವಸ್ಥಾನದಿಂದ ವಂಚಿತವಾಗಿತ್ತು. ಇದೀಗ ಕಾಂಗ್ರೆಸ್ ಬಹುಮತ ಸಾಧಿಸಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸತೀಶ್ ಮಂತ್ರಿಗಿರಿ ಗಿಟ್ಟಿಸಿಕೊಂಡು ಸಚಿವಸ್ಥಾನ ಇಲ್ಲವೆಂಬ ಕೊರತೆ ನೀಗಿಸಿದ್ದಾರೆ.