ಉ.ಕ ಸುದ್ದಿಜಾಲ :
ಬಿಜೆಪಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಯಾಗಿದೆ. ಕೇಂದ್ರ ಶಿಸ್ತು ಸಮಿತಿಯ ಸೆಕ್ರೆಟರಿ ಓಮ್ ಪಾಟಕ್ ಅವರು, ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ ಬೇಸರ – ಶೋಕಾಸ್ ನೋಟಿಸ್
ರಾಜ್ಯಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ಯತ್ನಾಳ್ ನಿರಂತರ ವಾಗ್ದಾಳಿ ನಡೆಸಿದ್ದರು. ಇದೇ ಕಾರಣಕ್ಕೆ ನೋಟಿಸ್ ಪ್ರಕಟಣೆ. ನೀವು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುವುದು, ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ನಿಲುವಿಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದರು.
ನಿಮ್ಮ ನಿಲುವುಗಳು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಯಲ್ಲಿ ಬಹಿರಂಗವಾಗಿದೆ. ಈ ಹಿಂದೆ ಹಲವು ಬಾರಿ ಶೋಕಾಸ್ ನೋಟಿಸ್ ಜಾರಿಯಾಗಿದೆ. ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನಿಂದ ನಡೆದುಕೊಳ್ತಿರೋದು ಆತಂಕಕಾರಿ ಸಂಗತಿ.
ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಪಕ್ಷದ ಅಧಿಕೃತ ನಿಲುವನ್ನು ಧಿಕ್ಕರಿಸುವುದು.
ಪಕ್ಷದ ನಾಯಕರ ವಿರುದ್ಧ ನೀವು ಮಾಡಿದ ಸುಳ್ಳು ಮತ್ತು ಆಂತರಿಕ ಆರೋಪಗಳು, ಪಕ್ಷದ ನಿಯಮಗಳು XXVನೇ ವಿಧಿಯಲ್ಲಿ ವ್ಯಾಖ್ಯಾನಿಸಿದಂತೆ ಪಕ್ಷದ ಶಿಸ್ತಿನ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು ಎಂಬುದಕ್ಕೆ ದಯವಿಟ್ಟು ಕಾರಣ ಕೊಡಿ. ಈ ಸೂಚನೆಯ ಸ್ವಿಕೃತಿ ಸ್ವೀಕರಿಸಿದ ದಿನಗಳಲ್ಲಿ ಉತ್ತರಗಳು ಎಂದು ಪತ್ರದಲ್ಲಿ ಉಲ್ಲೇಖಗಳಿವೆ.